ಉದಯವಾಹಿನಿ, ಬೆಂಗಳೂರು: ಚಾಕೊಲೇಟ್ ಆಸೆ ತೋರಿಸಿ ಮೂವರು ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ ಆರೋಪದಡಿ 64 ವರ್ಷದ ವೃದ್ಧನನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರು ಬೆಳಗ್ಗೆ 8:30ಕ್ಕೆ ಮಕ್ಕಳನ್ನು ಶಾಲೆಗೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. 10 ಗಂಟೆಗೆ ಶಾಲೆ ಆರಂಭವಾದರೂ ಬಾಲಕಿಯರು ಎಂಟೂವರೆಗೆ ಬರುತ್ತಿದ್ದನ್ನು ಮನಗಂಡ ವೃದ್ಧ ಮಕ್ಕಳಿಗೆ ಚಾಕೋಲೆಟ್ ಆಸೆ ತೋರಿಸಿ ಲೈಂಗಿಕ ಕಿರುಕುಳ ಕೊಡುತ್ತಿದ್ದ.
ಎರಡನೇ ತರಗತಿಯ ಬಾಲಕಿಗೆ ವೃದ್ಧ ಲೈಂಗಿಕ ಕಿರುಕುಳ ಕೊಟ್ಟಿದ್ದ. ಈ ಬಗ್ಗೆ ವಿದ್ಯಾರ್ಥಿನಿ ಮನೆಯಲ್ಲಿ ಪೋಷಕರಿಗೆ ತಿಳಿಸಿದ್ದರು. ವಿಚಾರಣೆ ಮಾಡಿದ ವೇಳೆ ಮೂರು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಆನೇಕಲ್ ಪೋಲಿಸ್ ಠಾಣೆಯಲ್ಲಿ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!