ಉದಯವಾಹಿನಿ, ದೋಲ್ಪುರ್ : 7 ವರ್ಷದ ಬಾಲಕಿ ಮೇಲೆ ಅಪರಿಚಿತರು ಅತ್ಯಾಚಾರ ಎಸಗಿರುವ ಪ್ರಕರಣ ಕಲಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಸಾಗಿದೆ ಎಂದು ತಿಳಿಸಿದರು. ಪ್ರಕರಣ ಕುರಿತು ಮಾಹಿತಿ ನೀಡಿದ ಸರ್ಕಲ್ ಆಫೀಸರ್ ಖಾಲೀಲ್ ಅಹ್ಮದ್, ಅಪರಿಚಿತ ವ್ಯಕ್ತಿಗಳ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆಕೆಗೆ ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ತಂಡ ಚಿಕಿತ್ಸೆ ನಡೆಸಿದೆ ಎಂದರು.
ಕಲೌರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ಮೆರವಣಿಗೆಯನ್ನು ಬಾಲಕಿ ನೋಡುತ್ತಿದ್ದಾಗ, ಅಪರಿಚಿತರು ಆಕೆಗೆ ವೀಳ್ಯದೆಲೆಯ ಆಮಿಷ ತೋರಿಸಿ ಎಳೆದೊಯ್ದಿದ್ದು, ಪಾಳು ಬಿದ್ದ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಮೇಲ್ಛಾವಣಿಯಿಂದ ಪಾಳು ಬಿದ್ದ ಮನೆಯಲ್ಲಿ ಬಾಲಕಿಯೊಂದಿಗೆ ಅಪರಿಚಿತ ವ್ಯಕ್ತಿ ಅನುಚಿತ ವರ್ತನೆ ನಡೆಸುತ್ತಿರುವ ಕೃತ್ಯವನ್ನು ಮಹಿಳೆಯೊಬ್ಬರು ಗಮನಿಸಿ, ತಕ್ಷಣಕ್ಕೆ ಅಲ್ಲಿದ್ದ ವೃದ್ಧರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನು ಪಾಳು ಬಿದ್ದ ಮನೆ ಪ್ರವೇಶಿಸುತ್ತಿದ್ದಂತೆ ಆರೋಪಿ ಕತ್ತಲಲ್ಲಿ ತಪ್ಪಿಸಿಕೊಂಡಿದ್ದ ಎಂದು ತಿಳಿಸಿದ್ದಾರೆ.ಸದ್ಯ ಪೊಲೀಸರು ಎಲ್ಲಾ ಸಾಕ್ಷ್ಯಗಳ ಪರಿಶೀಲನೆ ನಡೆಸುತ್ತಿದ್ದು, ಮದುವೆ ಸಮಾರಂಭದ ಮೆರವಣಿಗೆ ಮತ್ತು ಸುತ್ತಮುತ್ತಲಿನ ಪ್ರದೇಶದ ಪ್ರತ್ಯಕ್ಷ ದರ್ಶಿಗಳನ್ನು ಪ್ರಶ್ನಿಸಿದ್ದಾರೆ. ಘಟನೆ ಕುರಿತು ಎಲ್ಲಾ ರೀತಿಯ ತನಿಖೆ ಸಾಗಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
15 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ: ಮಹಾರಾಷ್ಟ್ರ ಅಹಲ್ಯಾನಗರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿಗಳು, ಹಲವು ದಿನಗಳ ಕಾಲ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಶುಕ್ರವಾರ ಬಾಲಕಿಯನ್ನು ಅಪಹರಿಸಿ ನಾಸಿಕ್-ಸೂರತ್ ರಸ್ತೆಯ ಬಳಿಯ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಐದು ದಿನ ಬಂಧಿಯಾಗಿರಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿ 13ರಂದು, ಬೆಳಗ್ಗೆ 9 ಗಂಟೆಯ ಸುಮಾರಿಗೆ ಬಾಲಕಿ ಶಾಲೆಗೆ ಹೋಗಲು ಮನೆಯಿಂದ ಹೊರಟಿದ್ದಳು. ಸಂಜೆಯವರೆಗೂ ಹಿಂತಿರುಗದೇ ಇದ್ದಾಗ ಆತಂಕಗೊಂಡ ಪೋಷಕರು ರಾಹುರಿ ಪೊಲೀಸ್ ಠಾಣೆಗೆ ತರಳಿ ಕಾಣೆಯಾಗಿರುವ ಮಗಳ ಬಗ್ಗೆ ದೂರು ದಾಖಲಿಸಿದ್ದರು. ಪೋಷಕರ ದೂರಿನ ನಂತರ, ಪೊಲೀಸ್ ತಂಡ ಬಾಲಕಿಗಾಗಿ ಹುಡುಕಾಟ ನಡೆಸಿ ಆಕೆಯನ್ನು ರಕ್ಷಿಸಿತ್ತು. ನಂತರ ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.
