ಉದಯವಾಹಿನಿ, ಬೈರುತ್ : ಲೆಬನಾನ್‌ನ ಬೆಕಾ ಕಣಿವೆಯಲ್ಲಿ ನಡೆದ ಇಸ್ರೇಲ್ ದಾಳಿಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಇಸ್ರೇಲ್ ಸೇನೆ ಹಿಜ್ಬುಲ್ಲಾ ಗುರಿಯಾಗಿಸಿಕೊಂಡು ಬಾಲ್ಬೆಕ್ ಪ್ರದೇಶದಲ್ಲಿ ಈ ದಾಳಿ ನಡೆಸಿರುವುದಾಗಿ ಹೇಳಿದೆ. ಇತ್ತೀಚಿನ ವಾರಗಳಲ್ಲಿ ಪೂರ್ವ ಲೆಬನಾನ್‍ನಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಇದು ಒಂದಾಗಿದೆ.
ಪೂರ್ವ ಲೆಬನಾನ್‌ನ ಬೆಕಾ ಕಣಿವೆಯ ಭಾಗವಾಗಿರುವ ಬಾಲ್‌ಬೆಕ್ ಪ್ರದೇಶದಲ್ಲಿರುವ ಹಿಜ್ಬುಲ್ಲಾ ಕಮಾಂಡ್ ಕೇಂದ್ರಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಮೃತರಲ್ಲಿ ಹಿಜ್ಬುಲ್ಲಾದ ಹಿರಿಯ ನಾಯಕನೊಬ್ಬ ಸೇರಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಇಸ್ರೇಲ್ ಮತ್ತು ಹಿಜ್ಬುಲ್ಲಾ 2024ರಲ್ಲಿ ಅಮೆರಿಕದ ಮಧ್ಯಸ್ಥಿಕೆಯ ಕದನ ವಿರಾಮಕ್ಕೆ ಒಪ್ಪಿಕೊಂಡವು. ಇದು ಒಂದು ವರ್ಷಕ್ಕೂ ಹೆಚ್ಚು ಕಾಲ ನಡೆದ ಗಡಿಯಾಚೆಗಿನ ಗುಂಡಿನ ದಾಳಿಯನ್ನು ಕೊನೆಗೊಳಿಸುವ ಉದ್ದೇಶವನ್ನು ಹೊಂದಿತ್ತು. ಇಸ್ರೇಲ್ ದಾಳಿಗಳಿಂದ ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆ ದುರ್ಬಲಗೊಂಡಿತ್ತು. ಆದರೆ ಎರಡೂ ಕಡೆಗಳಿಂದಲೂ ಮತ್ತೆ-ಮತ್ತೆ ಕದನ ವಿರಾಮ ಉಲ್ಲಂಘನೆ ನಡೆಯುತ್ತಿವೆ.

Leave a Reply

Your email address will not be published. Required fields are marked *

error: Content is protected !!