ಉದಯವಾಹಿನಿ, ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.
ಯುವ ಉದ್ಯಮಿ, ಮಹಿಳಾ ಉದ್ಯಮಿ ಮತ್ತು ಮರಾಠಿ ಉದ್ಯಮಿಗಳಿ
ಗೆ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಸಾಮಂತ್ ರಾಜ್ಯ ವಿಧಾನ ಪರಿಷತ್ತಿನಲ್ಲಿ ಘೋಷಿಸಿದರು.ಗಣ್ಯರಿಗೆ ನೀಡಲಾಗುವ ಮಹಾರಾಷ್ಟ್ರ ಭೂಷಣ ಪ್ರಶಸ್ತಿಯಂತೆಯೇ, ರತನ್ ಟಾಟಾ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಮತ್ತು ಕೈಗಾರಿಕೆ ಸಚಿವರನ್ನು ಒಳಗೊಂಡ ಸಮಿತಿ ಸಭೆ ನಡೆಸಿದೆ ಎಂದು ಅವರು ಹೇಳಿದ್ದಾರೆ.
