
ಉದಯವಾಹಿನಿ ಕುಶಾಲನಗರ:- ವ್ಯಕ್ತಿತ್ವ ನಿರ್ಮಾಣ ಹಾಗೂ ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳು ಸಹಕಾರಿಯಾಗಿದೆ ಎಂದು ರಾಜ್ಯ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಪ್ರತಾಪ್ ಲಿಂಗಯ್ಯ ಹೇಳಿದರು.
ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮೈಸೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಯೋಜನೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಎನ್ಎಸ್ಎಸ್ ಘಟಕದ ವತಿಯಿಂದ ಪ್ರೌಢಶಾಲೆಗಳ ಎನ್ಎಸ್ಎಸ್ ಘಟಕಗಳ ಮುಖ್ಯ ಶಿಕ್ಷಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳಿಗೆ ಏರ್ಪಡಿಸಿದ್ದ ಕಾರ್ಯಗಾರದಲ್ಲಿ ಮಾತನಾಡಿದರು.
ರಾಷ್ಟ್ರದ ಬೆಳವಣಿಗೆಯಲ್ಲಿ ಎನ್ಎಸ್ಎಸ್ ಪಾತ್ರ ಮಹತ್ವದ್ದಾಗಿದ್ದು ದೇಶದಲ್ಲಿ 45 ಲಕ್ಷ ಸ್ವಯಂಸೇವಕರನ್ನು ಎನ್ಎಸ್ಎಸ್ ಹೊಂದಿದೆ ರಾಜ್ಯದಲ್ಲಿ ಅತ್ಯಧಿಕ 6.4 ಲಕ್ಷ ಮಂದಿ ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆ ತಂದಿದೆ ರಾಜ್ಯದ 680 ಪ್ರೌಢಶಾಲೆಗಳಲ್ಲಿ ಎನ್ಎಸ್ಎಸ್ ಘಟಕವನ್ನು ಅನುಷ್ಠಾನಗೊಳಿಸಿದ್ದು 66ಸಾವಿರ ಮಂದಿ ಸ್ವಯಂಸೇವಕರಾಗಿ ಚಟುವಟಿಕೆಗಳಲ್ಲಿ ಸಕ್ರಿಯ ರಾಗಿದ್ದಾರೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ ವಿ ಸುರೇಶ್ ಅಧ್ಯಕ್ಷತೆ ವಹಿಸಿದ್ದರು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್ ಪಲ್ಯದ್. ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ ಟಿ ಸೋಮಶೇಖರ್ ಕಾಲೇಜಿನ ಉಪ ಪ್ರಾಂಶುಪಾಲ ಪರಮೇಶ್ವರಪ್ಪ ಕೂಡು ಮಂಗಳೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಇನ್ನು ಮುಂತಾದವರು ಹಾಜರಿದ್ದರು ವಿದ್ಯಾರ್ಥಿಗಳು ಎನ್.ಎಸ್.ಎಸ್. ಗೀತೆ ಹಾಡಿದರು ಕಾರ್ಯಗಾರದಲ್ಲಿ ಎನ್ಎಸ್ಎಸ್ ಘಟಕ ಹೊಂದಿರುವ ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಅಧಿಕಾರಿಗಳು ಪಾಲ್ಗೊಂಡಿದ್ದರು
