ಉದಯವಾಹಿನಿ, ರಾಯಚೂರು: ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಹಿನ್ನೆಲೆ ರಾಯಚೂರಿನಲ್ಲಿ ಮೆರವಣಿಗೆ ಆಯೋಜಿಸಲಾಗಿದ್ದು, ಜಿಲ್ಲಾ ಪೊಲೀಸರು ಅಲರ್ಟ್ ಆಗಿದ್ದಾರೆ. ಬಾಗಲಕೋಟೆ, ಕಲಬುರಗಿ ಘಟನೆ ಹಿನ್ನೆಲೆ ಜಿಲ್ಲಾ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ನಗರದ ಗಾಂಧಿ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ಅಂಬಾದೇವಿ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ಒಳಗೆ ಮೆರವಣಿಗೆ ಮುಗಿಸಲು ಪರವಾನಿಗೆ ನೀಡಲಾಗಿದ್ದು, ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಛತ್ರಪತಿ ಶಿವಾಜಿ ಪುತ್ಥಳಿ ಜೊತೆ ಶಿವಪಾರ್ವತಿ, ಶ್ರೀರಾಮ, ಆಂಜನೇಯ ಮತ್ತು ಗಣೇಶ ವಿಗ್ರಹಗಳು ಇರಲಿವೆ. ಮೆರವಣಿಗೆಯಲ್ಲಿ 400 ರಿಂದ 500 ಜನ ಸೇರುವ ನಿರೀಕ್ಷೆ ಇದೆ.
ಮೆರವಣಿಗೆಯುದ್ದಕ್ಕೂ ಪೊಲೀಸ್ ಕಣ್ಗಾವಲು ಇರಲಿದ್ದು, ಇಬ್ಬರು ಡಿವೈಎಸ್ಪಿ, 5 ಸಿಪಿಐ, 3 ಪಿಎಸ್‌ಐ, 120 ಪೊಲೀಸರ ಪೇದೆ, 1 ಕೆಎಸ್‌ಆರ್‌ಪಿ ಮತ್ತು 4 ಹೋಮ್ ಗಾರ್ಡ್ ತುಕಡಿ ನಿಯೋಜನೆ ಮಾಡಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗದಿರಲು ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!