ಉದಯವಾಹಿನಿ, ಬೆಂಗಳೂರು: ಒಂದೇ ದಿನದ ಮಟ್ಟಿಗೆ ರಾಜ್ಯಕ್ಕೆ ಬಂದರೂ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಎರಡು ಕ್ಲೋಸ್ ಡೋರ್ ಮೀಟಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಆಯೋಜನೆಗೊಂಡಿದ್ದ ಮನರೇಗಾ ಬಚಾವೋ ಸಂಗ್ರಾಮ ಪ್ರತಿಭಟನಾ ಸಮಾವೇಶಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಆಗಮಿಸಿ ದೆಹಲಿಗೆ ತೆರಳಲು ಜಕ್ಕೂರು ಏರೋಡ್ರೋಮ್ ಆಗಮಿಸಿದರು. ಈ ವೇಳೆ ವಿಮಾನ ನಿಲ್ದಾಣದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಜೊತೆ 15 ನಿಮಿಷ ಮಾತುಕತೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!