ಉದಯವಾಹಿನಿ, ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ) ವತಿಯಿಂದ ಕಾವೇರಿ 5ನೇ ಹಂತದ ಗೊಟ್ಟಿಗೆರೆ ಜಲಸಂಗ್ರಹಗಾರದ ಸಮೀಪ ಇಎಂಎಫ್ ಮೀಟರ್‌ಗಳನ್ನು ಅಳವಡಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವ ಪ್ರಯುಕ್ತ ಫೆ.26ರಂದು (ಗುರುವಾರ) ಬೆಳಗ್ಗೆ 6ರಿಂದ ಫೆ.27 (ಶುಕ್ರವಾರ) ಬೆಳಗ್ಗೆ 6ರವರೆಗೆ 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವ್ಯತ್ಯಯವಾಗುವ ಪ್ರದೇಶಗಳು:
ವೈಟ್‌ಫೀಲ್ಡ್, ನೆಲ್ಲೂರಹಳ್ಳಿ, ಸಿದ್ದಾಪುರ, ನಾಗೊಂಡನಹಳ್ಳಿ, ರಾಮಗೊಂಡನಹಳ್ಳಿ, ಚನ್ನಸಂದ್ರ, ಹೂಡಿ, ಗರುಡಾಚಾರ್ ಪಾಳ್ಯ, ದೊಡ್ಡನೆಕುಂದಿ, ಮುನೆಕೊಳಲು, ಕುಮಾರಸ್ವಾಮಿ ಲೇಔಟ್, ಪೂರ್ಣಪ್ರಜ್ಞಾ ಲೇಔಟ್, ಬನಶಂಕರಿ, ಕೊಲ್ಲಹಳ್ಳಿ, ಅಂಜನಾಪುರ, ಗೊಟ್ಟಿಗೆರೆ, ಬೇಗೂರು, ಕೊಡಿಚಿಕ್ಕನಹಳ್ಳಿ, ಕೂಡ್ಲು, ಕಾಡುಗೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು, ನಾಗರಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!