ಉದಯವಾಹಿನಿ, ಶಿವಮೊಗ್ಗ : ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ವಯಸ್ಕರು ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಎಂಬಾತನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗು ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಶಿವಮೊಗ್ಗ ಡಿಸಿ ಪ್ರಭುಲಿಂಗ ಘೋಷಣೆ ಮಾಡಿದ್ದಾರೆ.

ನಿನ್ನೆ ರಾತ್ರಿ ಸಂಕೇತನ ಸ್ನೇಹಿತನ ಜೊತೆಗೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಜಗಳ ಮಾಡುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಸಂಕೇತನಿಗೆ ಅಪ್ತಾಪ್ತ ವಯಸ್ಕರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇದೀಗ ಘಟನೆ ಸಂಬಂಧ ಪೊಲೀಸರು ಐವರು ಬಾಲಕರನ್ನು ಆರೆಸ್ಟ್ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ಪರಿಹಾರ ಸೇರಿ ಒಟ್ಟು 15 ಲಕ್ಷ ಪರಿಹಾರ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಅವರು ಘೋಷಣೆ ಮಾಡಿದ್ದಾರೆ.

ಘಟನೆಯ ಹಿನ್ನೆಲೆ
ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ, ವಿದ್ಯಾರ್ಥಿ ಸಂಕೇತ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ನಗರದಲ್ಲಿ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಈ ಬೆನ್ನಲ್ಲೇ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!