ಉದಯವಾಹಿನಿ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 9 ವರ್ಷಗಳ ಬಳಿಕ ಎರಡನೇ ಬಾರಿಗೆ ಇಸ್ರೇಲ್‌ಗೆ ಭೇಟಿ ನೀಡಿದ್ದಾರೆ. ಇಂದಿನಿಂದ 2 ದಿನಗಳ ಕಾಲ ಇಸ್ರೇಲ್ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದು 2017ರ ನಂತರದ ಭೇಟಿಯಾಗಿದೆ.
ಉಭಯ ನಾಯಕರು ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ ಮತ್ತು ಭದ್ರತೆ, ಕೃಷಿ, ನೀರು ನಿರ್ವಹಣೆ, ವ್ಯಾಪಾರ ಮತ್ತು ಆರ್ಥಿಕತೆದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಎರಡು ದೇಶಗಳ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಸಾಧ್ಯತೆ ಇದ್ದು, ಜಾಗತಿಕ ಬೆಳವಣಿಗೆಗಳ ಬಗ್ಗೆಯೂ ವಿಸ್ತೃತ ಚರ್ಚೆ ನಡೆಯಲಿದೆ. ಐರನ್ ಡೋಮ್ ವಾಯು ರಕ್ಷಣಾ ವ್ಯವಸ್ಥೆ ಖರೀದಿ ಹಾಗೂ 71,000 ಕೋಟಿ ರೂ. ಮೌಲ್ಯದ ರಕ್ಷಣಾ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಗಳೂ ಇವೆ ಎಂದು ತಿಳಿದುಬಂದಿದೆ.
ಈ ಮಧ್ಯೆ ಇಸ್ರೇಲ್ ಭೇಟಿಗೂ ಮುನ್ನ ಪ್ರಧಾನಿ ಮೋದಿ ವಿಶೇಷ ಸಂದೇಶವೊಂದನ್ನ ಹಂಚಿಕೊಂಡಿದ್ದಾರೆ. ʻನನ್ನ ಆತ್ಮೀಯ ಸ್ನೇಹಿತ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ನಾನು 2026ರ ಫೆಬ್ರವರಿ 25 ರಿಂದ 26 ರ ವರೆಗೆ ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡಲಿದ್ದೇನೆ.
