ಉದಯವಾಹಿನಿ ಕೆ.ಆರ್.ಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಕ್ಷರಿಯವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಸೃಷ್ಟಿಸಿ ಅವರ ಮೇಲೆ ದೂರನ್ನು ಸಲ್ಲಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರಕ್ಕೆ ಒತ್ತಡ ಹೇರುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ದ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ನಿಸರ್ಗಪ್ರಿಯರವರಿಗೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ ನೌಕರನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವೃಂದ ಸಂಘಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿಯವರು ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನು ತಡೆದುಕೊಳ್ಳಲಾಗದೇ ಕೆಲವು ನೌಕರರು ಅವರ ವಿರುದ್ದ ನಕಲಿ ಆರೋಪಗಳನ್ನು ಸೃಷ್ಟಿಮಾಡಿ ಅವರ ತೇಜೋವಧೆ ಮಾಡಲು ಹೊರಟಿದ್ದಾರೆ. ಅಲ್ಲದೇ ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಸರ್ಕಾರದ ಮೇಲೆ ಒತ್ತಾಯಿಸುತ್ತಿದ್ದಾರೆ. ಇದನ್ನು ವಿರೋಧಿಸಿ ತಾಲ್ಲೂಕು ಹಾಗೂ ಜಿಲ್ಲಾ ಸಂಘಗಳು ಅವರಿಗೆ ನೈತಿಕ ಬೆಂಬಲ ನೀಡುತ್ತಿದ್ದೇವೆ. ರಾಜ್ಯಾದ್ಯಕ್ಷರ ವಿರುದ್ದ ಇದುವರೆವಿಗೂ ಯಾವುದೇ ರೀತಿಯ ಗುರುತರ ಆರೋಪಗಳು ದಾಖಲಾಗದಿದ್ದರೂ ಕುತಂತ್ರದಿAದ ಇವರ ಮೇಲೆ ಆರೋಪಗಳನ್ನು ಮಾಡಲಾಗಿದೆ. ಅಂಥಹವರನ್ನು ಕೂಡಲೇ ಸಂಘವಿರೋಧಿ ಚಟುವಟಿಕೆಗಳ ಆಧಾರದ ಮೇಲೆ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ಇದೇ ಸಂಧರ್ಭದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಜೆ.ಕುಮಾರ್, ರಾಜ್ಯಪರಿಷತ್ ಸದಸ್ಯ ಹೆಚ್.ಕೆ.ಮಂಜುನಾಥ್, ಖಜಾಂಚಿ ಡಿ.ಆರ್.ಕೃಷ್ಣಮೂರ್ತಿ, ಹಿರಿಯ ಉಪಾಧ್ಯಕ್ಷ ಎಸ್.ಆರ್.ಆನಂದ್‌ಕುಮಾರ್, ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್, ಉಪಾದ್ಯಕ್ಷ ಹರೀಶ್, ನಿರ್ದೇಶಕರಾದ ಜಯರಾಮು, ಎಂ.ಎನ್.ವೆAಕಟೇಶ್, ಧರ್ಮೇಂದ್ರ, ಸುಧಾಕರ, ದಿನೇಶ್, ಸತೀಶ್ ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!