
ಉದಯವಾಹಿನಿ,ಶಿಡ್ಲಘಟ್ಟ: ಸರ್ಕಾರದ ನಾನಾ ಸವಲತ್ತುಗಳನ್ನು ಪಡೆಯಲು ರೈತರು ಹಾಗೂ ಸಾರ್ವಜನಿಕರು ಸರ್ಕಾರಿ ಕಚೇರಿಗೆ ಅಲೆಯಬಾರದೆಂಬ ಉದ್ದೇಶದಿಂದ ಸರ್ಕಾರ ಸಾರ್ವಜನಿಕರ ಕುಂದು ಕೊರತೆಗಳ ಸಭೆಯ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು
ಎಂದು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ತಿಳಿಸಿದರು.
ತಾಲೂಕಿನ ಬಶೆಟ್ಟಹಳ್ಳಿ ಹೋಬಳಿ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ತಮ್ಮ ಮೂಲಭೂತ ಸಮಸ್ಯೆಗಳು, ಸೌಲಭ್ಯಗಳನ್ನು ತಮ್ಮ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಗೆಹರಿಸಿಕೊಳ್ಳಬೇಕು. ನಿಮ್ಮ ಸಮಸ್ಯೆಗಳನ್ನು ನಮಗೆ ತಿಳಿಸಿ ಸಾಧ್ಯವಾದರೆ ಇಲ್ಲೇ ಪರಿಹಾರ ನೀಡುತ್ತೇವೆ, ಇಲ್ಲದಿದ್ದರೆ ಮೇಲಾಧಿಕಾರಿಗಳಿಗೆ ತಲುಪಿಸುತ್ತೇವೆ ಎಂದು ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಾಲರೆಡ್ಡಿ ಮಾತನಾಡಿ ಸಾರ್ವಜನಿಕರು ನಗರಕ್ಕೆ ಹೋಗಿ ಅಲ್ಲಿ ಅಲೆದಾಡಿ ಕೆಲಸಗಳನ್ನು ಮಾಡಿಸುವಂತಹ ಪರಿಸ್ಥಿಯನ್ನು ತಪ್ಪಿಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಡಿಕೊಳ್ಳಲು ಸರ್ಕಾರ ಅನೂಲ ಮಾಡಿಕೊಟ್ಟಿದೆ ಎಲ್ಲರೂ ಅದನ್ನ ಸದುಪಯೋಗಪಡಿಸಿಕೊಳ್ಳಿ ಎಂದರು.
ಗ್ರಾಮ ಪಂಚಾಯತಿ ಸದಸ್ಯ ಸಿ.ವೆಂಕಟೇಶಪ್ಪ ಮಾತನಾಡಿ ಸಾರ್ವಜನಿಕರಿಗೆ ನಗರಕ್ಕೆ ಹೋಗಿ ಅಲೆದಾಡುವ ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಎಲ್ಲಾ ಸೌಲಭ್ಯಗಳು ಸಿಗುತ್ತವೆ. ಇಲ್ಲಿ ಯಾವುದೇ ದಲ್ಲಾಳಿಗಳ ಹಾವಳಿ ಇಲ್ಲದೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಸಾರ್ವಜನಿಕರಿಂದ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ಚರಂಡಿಗಳ ಸ್ವಚ್ಛತೆಯ ಸಮಸ್ಯೆ ನೀರಿನ ಸಮಸ್ಯೆ ಹಾಗೂ ಅಂಗನವಾಡಿ ಶಾಲಾ ಕಟ್ಟಡಗಳ ಅವ್ಯವಸ್ಥೆ ಮೂಲಭೂತ ಸೌಲಭ್ಯಗಳು,ವಿವಿಧ ರೀತಿಯ ಸಮಸ್ಯೆಗಳ ಬಗ್ಗೆ ಅಹವಾಲು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಮಂಜುನಾಥ್, ರೇಷ್ಮೆ ಇಲಾಖೆ ನಿರ್ದೇಶಕ ಜಗದೇವಪ್ಪ ಗುಗ್ಗುರಿ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಜ್ರೇಶ್ ಕುಮಾರ್, ಕಾರ್ಯದರ್ಶಿ ರಾಮಚಂದ್ರಪ್ಪ,ಗ್ರಾ ಪಂ ಸದಸ್ಯರಾದ ಅಶ್ವತ್ಥಮ್ಮ,ಗಿರಿಜಾಂಬ,ಮುಖಂಡರಾದ ಮುನಿಶಾಮಿ,ಪೂಜಪ್ಪ,ತಿಮ್ಮರಾಜು,ಸ್ತ್ ರೀ ಶಕ್ತಿ ಸಂಘದ ಸದಸ್ಯರು,ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
