
ಉದಯವಾಹಿನಿ ಮುದಗಲ್ಲ: ಪಟ್ಟಣದ ಪುರಸಭೆಯ ಕಾರ್ಯಾಲಯ ದಲ್ಲಿ ಪೌರ ಕಾರ್ಮಿಕರಿಗೆ ಕಸ ವಿಂಗಡಣೆ , ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವ ಬಗ್ಗೆ ಪೌರಕಾರ್ಮಿಕರಿಗೆ ಅರಿವು ಮೂಡಿಸಲಾಯಿತು. ನೈಮಲ್ಯ ವಿಭಾಗದ ಅಧಿಕಾರಿಯಾದ ರೈಮತ್ ಹುನ್ನಿಸಾ ಬೇಗಂ ಮಾತನಾಡಿ ಸರ್ಕಾರ ಪ್ಲಾಸ್ಟಿಕ್ ನಿಷೇಧ ಕಾನೂನು ಜಾರಿಗೆ ತಂದರು ಅಂಗಡಿ ಮತ್ತು ಮುಗ್ಗಟ್ಟುಗಳಲ್ಲಿ ಅತಿ ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ ಇದರಿಂದ ಪರಿಸರಕ್ಕೆ ತೊಂದರೆ ಯಾಗುತ್ತದೆ. ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ನ್ನು ಗುರುತಿಸಿ ಅಂತಹ ವಸ್ತುಗಳನ್ನು ವಶಪಡಿಸಿಕೊಳ್ಳುವ ಮೂಲಕ ಮಾಲೀಕರಿಗೆ ಎಚ್ಚರಿಕೆ ನೀಡುವ ಜೊತೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಹೇಳಬೇಕು ಎಂದರು. ಈ ಸಂದರ್ಭದಲ್ಲಿ ಪುರಸಭೆಯ ನೈಮಲ್ಯ ಅಧಿಕಾರಿ ರೈಮತ್ ಹುನ್ನಿಸಾ ಬೇಗಂ ಹಾಗೂ ಪೌರಕಾರ್ಮಿಕರು ಹಾಜರಿದ್ದರು.
