ಉದಯವಾಹಿನಿ,: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ವಿರುದ್ಧ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ಹೋಗಿ ಒಬ್ಬ ಅಪರಾಧಿಯನ್ನು ಅಪ್ಪಿಕೊಂಡರು ಎಂದು ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮೆಹಬೂಬಾ ಮುಫ್ಟಿ, ಪ್ರಧಾನಿ ಮೋದಿ ಇಸ್ರೇಲ್‌ಗೆ ಹೋಗಿ ಒಬ್ಬ ಅಪರಾಧಿಯನ್ನು ಅಪ್ಪಿಕೊಂಡರು. ನೆತನ್ಯಾಹು ಅವರನ್ನು ಜಗತ್ತು ದೂರವಿಟ್ಟಿದೆ. ಅನೇಕ ದೇಶಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗೆ  ಇಸ್ರೇಲ್ ಗೆ ತೆರಳಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ, ಕೃಷಿ, ನೀರು ನಿರ್ವಹಣೆ, ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಹೂಡಿಕೆ ಹಾಗೂ ಜನರ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಈ ಭೇಟಿಯು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

Leave a Reply

Your email address will not be published. Required fields are marked *

error: Content is protected !!