ಉದಯವಾಹಿನಿ,: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ಹೆಸರಾಂತ ನಟ ವಿಜಯ್ ದೇವರಕೊಂಡ ವಿವಾಹವು ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದಿದೆ. ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ವಿರೋಶ್ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದೆ. ಕುಟುಂಬಸ್ಥರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಅದ್ಧೂರಿ ಮದ್ವೆಗೆ ಉದಯ್‌ಪುರ ಸಾಕ್ಷಿ: ಹಲವು ವರ್ಷಗಳಿಂದ ಕದ್ದು ಮುಚ್ಚಿ ಪ್ರೀತಿಸ್ತಾ ಇದ್ದ ಜೋಡಿ, ಇದೀಗ ಆಪ್ತರ ಮುಂದೆಯೇ ಹೊಸ ಜೀವನಕ್ಕೆ ಕಾಲಿಟ್ಟಿದೆ. ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಾಗೂ ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ರಾಜಸ್ಥಾನದ ಉದಯಪುರದಲ್ಲಿ (Udaipur) ಹಸೆಮಣೆ ಏರಿದ್ದಾರೆ. ಬೆಳಗ್ಗೆ ಎಂಟು ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಈ ತಾರಾ ಮದ್ವೆಗೆ ಕೆಲವೇ ಕೆಲವು ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿತ್ತು. ಹಾಗಾಗಿ ಕುಟುಂಬಸ್ಥರು ಮತ್ತು ಆಪ್ತರು ಈ ಮದ್ವೆಗೆ ಸಾಕ್ಷಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!