ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ (2nd PUC Exam) ಪರೀಕ್ಷೆ ಆರಂಭವಾಗಲಿದ್ದು, ಈ ವೇಳೆ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ.

ನಾಳೆಯಿಂದ ಮಾ.17ರವರೆಗೆ ಪರೀಕ್ಷೆ ನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಪರೀಕ್ಷೆ ನಡೆಯಲಿದೆ. ಹೀಗಾಗಿ ಎಕ್ಸಾಂ ಸೆಂಟರ್‌ಗಳಲ್ಲಿ ಕಟ್ಟೆಚ್ಚರ, ಸೋಶಿಯಲ್ ಮೀಡಿಯಾದ ಮೇಲೂ ಬೋರ್ಡ್ ಕಣ್ಣಿಟ್ಟಿದೆ. ಜೊತೆಗೆ ಪೇಪರ್ ಲೀಕ್ ಆಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದ್ದು, ಪ್ರಶ್ನೆಪತ್ರಿಕೆ ರವಾನೆಗೂ ಬಿಗಿ ಭದ್ರತೆ ವಹಿಸಲಾಗಿದೆ. ಪರೀಕ್ಷೆ ನಡೆಯೋ ದಿನದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಕಂಪ್ಯೂಟರ್ ಶಾಪ್ ಕ್ಲೋಸ್‌ಗೆ ಕ್ರಮ.
ಹಿಂದಿನ ಪರೀಕ್ಷೆಗಳಲ್ಲಿ ಅಕ್ರಮದಲ್ಲಿ ಭಾಗಿಯಾಗಿರೋ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆಯಿಂದ ವಿಶೇಷ ನಿಗಾ.
ಪರೀಕ್ಷೆ ನಡೆಯೋ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ.
ಸುಳ್ಳು ಸುದ್ದಿ ಹರಡಿಸೋ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಪೊಲೀಸ್ ಇಲಾಖೆ ನೇತೃತ್ವದಲ್ಲಿ ವಿಶೇಷ ತಂಡದ ರಚನೆ.
ಇಡೀ ಪರೀಕ್ಷಾ ವ್ಯವಸ್ಥೆ ಮಾನಿಟರ್ ಮಾಡಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ, ಪ್ರತಿ ಜಿಲ್ಲೆ ಡಿಸಿಗಳು, ಎಸ್ಪಿಗಳು ಮಾನಿಟರ್ ಮಾಡಲು ವ್ಯವಸ್ಥೆ.
ಪ್ರಶ್ನೆಪತ್ರಿಕೆ ಖಜಾನೆಯಿಂದ ಕೇಂದ್ರಗಳಿಗೆ ಹೋಗೋವಾಗ ಬಿಗಿ ಪೊಲೀಸ್ ಭದ್ರತೆ, ಪ್ರಶ್ನೆಪತ್ರಿಕೆ ರವಾನೆ ವಿಡಿಯೋ ಚಿತ್ರೀಕರಣದ ವ್ಯವಸ್ಥೆ.
ನಿಗದಿ ಮಾಡಿದ ಸಮಯಕ್ಕಿಂತ ಮೊದಲು ಪ್ರಶ್ನೆಪತ್ರಿಕೆ ಖಜಾನೆಯಿಂದ ಓಪನ್ ಮಾಡುವಂತೆ ಇಲ್ಲ. ಅಂತಹ ಘಟನೆ ಕಂಡುಬಂದ್ರೆ ಜವಾಬ್ದಾರಿ ಕೊಟ್ಟಿರುವವರ ಮೇಲೆ ಕಾನೂನು ಕ್ರಮ.
ಪ್ರಶ್ನೆಪತ್ರಿಕೆ ಜವಾಬ್ದಾರಿವಹಿಸಿರುವವರು ಅಕ್ರಮದಲ್ಲಿ ಭಾಗಿಯಾದ್ರೆ ಕಾನೂನು ಕ್ರಮದ ಎಚ್ಚರಿಕೆ.
ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಸಂಪೂರ್ಣ ಫೋನ್ ನಿಷೇಧ.
ಪರೀಕ್ಷಾ ಕೇಂದ್ರಗಳಿಗೆ ವಾಚ್ ಸೇರಿ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಭದ್ರತೆ, ಜಿಲ್ಲೆಗಳಲ್ಲಿ ಎಸ್ಪಿ, ಡಿಸಿಗಳ ನೇತೃತ್ವದಲ್ಲಿ ಭರವಸೆ.
ಪ್ರತಿ ಕೇಂದ್ರದಲ್ಲಿ ಸಿಟ್ಟಿಂಗ್ ಸ್ಕ್ವಾಡ್, ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ., ಪ್ರತಿ ಕೇಂದ್ರದಲ್ಲಿ ಪೊಲೀಸರ ವ್ಯವಸ್ಥೆ.

Leave a Reply

Your email address will not be published. Required fields are marked *

error: Content is protected !!