ಉದಯವಾಹಿನಿ,ಕೊಲಂಬೊ, : 2019ರ ಈಸ್ಟರ್ ರವಿವಾರದ ಭೀಕರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಲಾಗಿದೆ. ದಾಳಿಗೆ ಪಿತೂರಿ ರೂಪಿಸಿದ್ದು ಹಾಗೂ ಸಹಕಾರ ನೀಡಿದ ಆರೋಪದ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿ ಮಾಡಿದೆ.
2019ರ ಏಪ್ರಿಲ್ ನಲ್ಲಿ ನಡೆದ ಈ ದಾಳಿಯಲ್ಲಿ 279 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಮೃತರಲ್ಲಿ 45 ವಿದೇಶಿ ಪ್ರಜೆಗಳೂ ಸೇರಿದ್ದರು. ದಾಳಿಯ ಪರಿಣಾಮವಾಗಿ ದೇಶದ ಪ್ರವಾಸೋದ್ಯಮ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿತ್ತು.

Leave a Reply

Your email address will not be published. Required fields are marked *

error: Content is protected !!