ಉದಯವಾಹಿನಿ, ನವದೆಹಲಿ: ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳು ಅದರಲ್ಲಿಯೂ ದಂಗೆಕೋರರಿಗೆ ಚೀನಾ ನೆರವು ನೀಡಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ನಿವೃತ್ತ ಜನರಲ್ ಎಂ.ಎಂ ನರವಣೆ ಅನುಮಾನ ವ್ಯಕ್ತಪಡಿಸಿ
ದ್ದಾರೆ.
ಗಡಿ ಪ್ರದೇಶಗಳಲ್ಲಿನ ಅಸ್ಥಿರತೆ ದೇಶದ ರಾಷ್ಟ್ರೀಯ ಭದ್ರತೆಗೆ ಒಳ್ಳೆಯದಲ್ಲ. ಹಿಂಸಾಚಾರವನ್ನು ತಡೆಗಟ್ಟುವುದು ತುರ್ತು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಅಗತ್ಯ ಕ್ರಮಕೈಗೊಳ್ಳಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ಒಂದು ವೇಳೆ “ವಿದೇಶಿ ಏಜೆನ್ಸಿಗಳು ಭಾಗಿಯಾಗಿದ್ದರೆ ಅದನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮಣೀಪುರದಲ್ಲಿ ನಡೆದಿರುವ ಹಿಂಸಾಚಾರದ ಹಿಂದೆ ಚೀನಾದ ನೆರವು ನೀಡಿರುವ ಸಾಧ್ಯತೆಗಳು ಅಧಿಕವಾಗಿದೆ. ಒಂದು ವೇಳೆ ಅದು ಸಾಬೀತಾದರೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ ಮತ್ತು ಅನಿವಾರ್ಯವೂ ಕೂಡ ಎಂದಿದ್ದಾರೆ.
