ಉದಯವಾಹಿನಿ, ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಪತ್ನಿ ಸಂಗೀತಾ ಸೊರ್ನಲಿಂಗಂ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಟನ ಜೊತೆಗಿನ 27 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. 1999 ರ ಆಗಸ್ಟ್‌ನಲ್ಲಿ ವಿವಾಹವಾದ ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ವಿಜಯ್ ಅವರು ನಟಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಪತ್ನಿ ಆರೋಪಿಸಿದ್ದಾರೆ. ಈ ಸಂಬಂಧ ನಿಲ್ಲಿಸುತ್ತೇನೆ ಅಂತ ವಿಜಯ್ ಭರವಸೆ ಕೊಟ್ಟಿದ್ದರು. ಆದರೆ, ಅದು ಹಾಗೆಯೇ ಮುಂದುವರಿದಿದೆ ಎಂದು ಅರ್ಜಿಯಲ್ಲಿ ಸಂಗೀತಾ ಉಲ್ಲೇಖಿಸಿದ್ದಾರೆ.
ಪತಿ ನನ್ನನ್ನು ಸಾಮಾಜಿಕ ಮತ್ತು ವೃತ್ತಿಪರ ಜೀವನದಿಂದ ದೂರ ಇಟ್ಟಿದ್ದಾರೆ. ವಿದೇಶ ಪ್ರವಾಸ ಮಾಡುವುದು ಮತ್ತು ಆ ನಟಿಯೊಂದಿಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸಿದ್ದಾರೆ. ಈ ಪ್ರವಾಸದ ಫೋಟೊಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದರಿಂದ ನನಗೆ ಮತ್ತು ಮಕ್ಕಳಿಗೆ ಅವಮಾನವಾಗಿದೆ ಎಂದು ವಿಜಯ್ ಪತ್ನಿ ಆರೋಪಿಸಿದ್ದಾರೆ.
