ಉದಯವಾಹಿನಿ, ಹಾವೇರಿ: ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿನಿ ಪರದಾಡಿರುವ ಘಟನೆ ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ನಡೆದಿದೆ. ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬಿಡದೇ ಸತಾಯಿಸಿದ್ದಾರೆ.
30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಸಾರಾಗೆ ಹಾಲ್ ಟಿಕೆಟ್ ನೀಡುವಂತೆ ಸಾಮಾಜಿಕ ಹೋರಾಟಗಾರ ಹನುಮಂತಪ್ಪ ಆಗ್ರಹಿಸಿದ್ದು, ವಿದ್ಯಾರ್ಥಿನಿ ಭವಿಷ್ಯ ಹಾಳು ಮಾಡ್ತಿದ್ದೀರಿ ಎಂದು ಕಿಡಿಕಾರಿದ್ದಾರೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಪೀಸ್ ಕಟ್ಟೋವರೆಗೂ ಬೈಕ್ ಅಡಮಾನ ಇಟ್ಟುಕೊಂಡು ನಂತರ ಹಾಲ್ ಟಿಕೆಟ್ ನೀಡಿದೆ.

ವರದಿ ಬೆನ್ನಲ್ಲೇ ಈ ಕುರಿತು ಕಾರಣ ಕೇಳಿ ನೋಟಿಸ್ ಕೊಡೋದಾಗಿ ರಾಣೇಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮ ಸುಂದರ್ ಅಡಿಗಾ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!