ಉದಯವಾಹಿನಿ, ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಇಂದು ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ ಮೇಲೆ ಮುಸ್ಲಿಂ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಘಟನೆ ಸಂಬಂಧ ಹಲ್ಲೆ ನಡೆಸಿದ ಎಲ್ಲಾ ನಾಲ್ವರು ಆರೋಪಿಗಳನ್ನ ಬಂಧಿಸಿರುವುದಾಗಿ ಕೊಡಗು ಎಸ್ಪಿ ಬಿಂದು ಮಣಿ ಮಾಹಿತಿ ನೀಡಿದ್ದಾರೆ. ಸಿದ್ದಿಕ್, ಸುಹೆಲ್, ನಾಭಿ, ರಶೀದ್ ಬಂಧಿತರು.

ಏನಾಗಿತ್ತು?
ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಹಿಂದೂ ಸಂಗಮ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೀತಿವೆ. ಮಡಿಕೇರಿ ತಾಲೂಕಿನ ಬಲ್ಲಮಾವಟಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ ಅಂತ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗ್ತಿತ್ತು. ನಾಪೋಕ್ಲು ಪಟ್ಟಣದಲ್ಲಿ ಹಿಂದೂ ಯುವಕರು ಪಿಕಪ್ ವಾಹನದಲ್ಲಿ ಸೌಂಡ್ ಬಾಕ್ಸ್ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ರು. ಈ ವೇಳೆ ಕೆಲ ಮುಸ್ಲಿಂ ಯುವಕರು ಈ ಭಾಗದಲ್ಯಾಕೆ ಪ್ರಚಾರ ಮಾಡ್ತಿದ್ದೀರಾ ಎಂದು ಪ್ರಶ್ನೆ ಮಾಡಿ ಜಗಳ ಶುರು ಮಾಡಿದ್ದಾರೆ. ಹಿಂದೂ ಯುವಕರು-ಮುಸ್ಲಿಂ ಯುವಕರಿಗೆ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಕೊನೆಗೆ ಗೌತಮ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗೌತಮ್‌ನ ಕೂಡಲೇ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!