ಉದಯವಾಹಿನಿ, ಢಾಕಾ: ಬಾಂಗ್ಲಾದೇಶದಲ್ಲಿ 2024ರ ಜುಲೈನಲ್ಲಿ ನಡೆದ ವಿದ್ಯಾರ್ಥಿ ದಂಗೆಯ ವೇಳೆ ರಾಷ್ಟ್ರ ರಾಜಧಾನಿ ಢಾಕಾದಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿರುವ ಆರೋಪ ಪಟ್ಟಿಯಲ್ಲಿ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ 25 ಜನರ ಹೆಸರನ್ನು ಸೇರಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಲಭ್ಯವಿರುವ ಮಾಹಿತಿ ಪ್ರಕಾರ, ಢಾಕಾದ ಪ್ರಗತಿ ಸರಾನಿ ಪ್ರದೇಶದಲ್ಲಿ 2024ರ ಜುಲೈ 19ರಂದು ಸರ್ಕಾರದ ವಿರುದ್ಧ ನಡೆಯುತ್ತಿದ್ದ ಬೃಹತ್‌ ಪ್ರತಿಭಟನಾ ಮೆರವಣಿಗೆ ವೇಳೆ ಅಬುಜರ್ ಶೇಖ್ ಎಂಬವರ ಮೇಲೆ ಗುಂಡು ಹಾರಿಸಲಾಗಿತ್ತು.
ಅವರು, ಢಾಕಾ ಮೆಟ್ರೋಪಾಲಿಟನ್ ಆಸ್ಪತ್ರೆಯಲ್ಲಿ ಜುಲೈ 27ರಂದು ಮೃತಪಟ್ಟರು ಎನ್ನಲಾಗಿದೆ.
ಈ ಪ್ರಕರಣದಲ್ಲಿ ಹಸೀನಾ, ಮಾಜಿ ಸಚಿವ ಅಬೈದುಲ್ ಖಾದ‌ರ್ ಮತ್ತು ಅಸಾದುಜ್ಜಮಾನ್ ಖಾನ್ ಕಮಲ್ ಸೇರಿದಂತೆ 25 ಮಂದಿಯ ವಿರುದ್ಧ ಭಯೋತ್ಪಾದನೆ ನಿಗ್ರಹ ಘಟಕ (ಎಟಿಯು) ಆರೋಪಪಟ್ಟಿ ದಾಖಲಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆ ‘ಬಿಎಸ್‌ಎಸ್’ ವರದಿ ಮಾಡಿದೆ.
ಹಸೀನಾ ಅವರ ಅವಾಮಿ ಲೀಗ್ ಹಾಗೂ ಅದರ ಯುವ ಘಟಕ ಜುಬೊ ಲೀಗ್‌ನ ಸ್ಥಳೀಯ ನಾಯಕರು ಪ್ರತಿಭಟನಾಕಾರರತ್ತ ಗುಂಡು ಹಾರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ದೂರಲಾಗಿದೆ.

Leave a Reply

Your email address will not be published. Required fields are marked *

error: Content is protected !!