ಉದಯವಾಹಿನಿ, ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ (SI) ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಪಕ್ಕದಲ್ಲೇ ಇದ್ದ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸಿರ್ ಹುಸೇನ್ ಸಾವನ್ನು ಆಸ್ಪತ್ರೆ ವೈದ್ಯರು ದೃಢಪಡಿಸಿದರು.

Leave a Reply

Your email address will not be published. Required fields are marked *

error: Content is protected !!