ಉದಯವಾಹಿನಿ, ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರನ್ನ ಪತಿ ಕಾರ್ತಿಕ್ ಹೂಗಾರ (34), ಪತ್ನಿ ಐಶ್ವರ್ಯ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರಿಬ್ಬರು ಹಾವೇರಿ ನಗರದ ನಿವಾಸಿಗಳಾಗಿದ್ದು, ನಿನ್ನೆ ದೇವರ ದರ್ಶನಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮದುವೆಯಾಗಿ ಕೇವಲ 15 ದಿನಗಳು ಆಗಿತ್ತು ಅಷ್ಟೇ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಚರಣೆ ನಡೆಸಿ ಕಾರಿನಿಂದ ಮೃತದೇಹ ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಖಲಾಗಿದ್ದ ‌ಮಾಡಲಾಗಿದೆ. ಇತ್ತ ಎರಡೂ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!