ಉದಯವಾಹಿನಿ, ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಮನಗಂಡು ಸಿಎಂ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವರ ನಿರ್ದೇಶನದ ಮೇರೆಗೆ ರಾಜ್ಯ ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ಸಂಪೂರ್ಣವಾಗಿ ಸಕ್ರಿಯಗೊಳಿಸಲಾಗಿದ್ದು, 24*7 ಕಾರ್ಯನಿರ್ವಹಿಸುತ್ತಿವೆ.
ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿರುವ ಇತ್ತೀಚಿನ ಮಾರ್ಗಸೂಚಿಯ ಪ್ರಕಾರ, ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ, ಬಹ್ರೇನ್, ಓಮಾನ್, ಇರಾಕ್, ಜೋರ್ಡನ್, ಕುವೈತ್, ಯುಎಇ ಹಾಗೂ ಖತಾರ್ ದೇಶಗಳ ವಾಯುಪ್ರದೇಶಗಳು ಪ್ರಸ್ತುತ ಮುಚ್ಚಲ್ಪಟ್ಟಿವೆ. ಜೊತೆಗೆ ಹಲವಾರು ರಾಷ್ಟ್ರಗಳು ಓಔಖಿಂಒ ಪ್ರಕಟಿಸಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಗಂಭೀರ ವ್ಯತ್ಯಯ ಉಂಟಾಗಿದೆ.

ವಿಮಾನ ಸಂಚಾರದಲ್ಲಿ ಉಂಟಾದ ವ್ಯತ್ಯಯದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಅನೇಕ ಪ್ರಯಾಣಿಕರು ಮಧ್ಯಪ್ರಾಚ್ಯದ ದೇಶಗಳಲ್ಲಿ, ವಿಶೇಷವಾಗಿ UAE (ದುಬೈ)ನಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಮಾನ್ಯ ಕಂದಾಯ ಸಚಿವರ ನಿರ್ದೇಶನದ ಮೇರೆಗೆ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು ಸಂಪೂರ್ಣವಾಗಿ ಸಕ್ರಿಯಗೊಳಿಸಲಾಗಿದ್ದು, 24×7 ಕಾರ್ಯನಿರ್ವಹಿಸುತ್ತಿವೆ. Karnataka State Disaster Management Authority ಆಯುಕ್ತರನ್ನು ನೋಡೆಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಅವರು ನವದೆಹಲಿಯ ಕರ್ನಾಟಕ ಭವನದಲ್ಲಿರುವ ಕರ್ನಾಟಕ ರಾಜ್ಯ ನಿವಾಸ ಆಯುಕ್ತರ ಕಚೇರಿ ಹಾಗೂ Ministry of External Affairs ಜೊತೆಗೆ ಸಮನ್ವಯ ಸಾಧಿಸಿ, ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕರ್ನಾಟಕದ ನಾಗರಿಕರಿಗೆ ಅಗತ್ಯ ನೆರವು ಮತ್ತು ಬೆಂಬಲ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಹಾಗೂ ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು (DEOC) Ministry of External Affairs ಮತ್ತು ಪರಿಣಾಮಿತ ದೇಶಗಳ ಭಾರತೀಯ ರಾಯಭಾರಿ ಕಚೇರಿ/ಕಾನ್ಸುಲೇಟ್‌ಗಳಿಂದ ಹೊರಡಿಸಲಾಗುತ್ತಿರುವ ಸೂಚನೆಗಳನ್ನು ನಿಯಮಿತವಾಗಿ ನವೀಕರಿಸುತ್ತಿವೆ. ನವದೆಹಲಿ ಕರ್ನಾಟಕ ಭವನದಲ್ಲಿಯೂ ಸಮನ್ವಯಕ್ಕಾಗಿ ವಿಶೇಷ ತಂಡವನ್ನು ಸಕ್ರಿಯಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!