ಉದಯವಾಹಿನಿ, ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರ ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ಜನಾಭಿಪ್ರಾಯ ಪರಿಗಣಿಸದೇ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ ಈ ಪಂಚಾಯಿತಿಗಳನ್ನ ಮದ್ದೂರು ನಗರಸಭೆಗೆ ಸೇರಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಳಿದ್ದೇನೆ. ಸರಕಾರ ಜನತೆಯ ನಿಲುವುಗಳಿಗೆ ವಿರುದ್ಧವಾಗಿ ಹೋಗಬಾರರದು. ಈ ಹಿನ್ನೆಲೆಯಲ್ಲಿ ತಾವು ಮಧ್ಯಪ್ರವೇಶ ಮಾಡಿ ಇದಕ್ಕೆ ತಡೆಯೊಡ್ಡಬೇಕು ಎಂದು ಕೋರಿದ್ದಾರೆ.

ಈ ಎಲ್ಲಾ ಪಂಚಾಯಿತಿಗಳ ಗ್ರಾಮಸ್ಥರು ಹಾಗೂ ಪಂಚಾಯಿತಿಗಳ ಸದಸ್ಯರು, ರೈತ ಮುಖಂಡರಾದ (Farmer Leader) ಸುನಂದಾ ಜಯರಾಂ ಅವರು ಸೇರಿದಂತೆ ಅನೇಕರುವ ಈ ಬಗ್ಗೆ ಮನವಿ ಮಾಡಿದ್ದು, ಇವರೆಲ್ಲರೂ 70 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ನಾನು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರ ಬೇಡಿಕೆಗಳನ್ನು ಆಲಿಸಿದ್ದೇನೆ ಎಂದು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಸುನಂದಾ ಜಯರಾಮ್ ಅವರು ತಮಗೆ ನೀಡಿದ್ದ ಮನವಿ ಪತ್ರವನ್ನು ಲಗತ್ತಿಸಿದ್ದಾರೆ.
ಯಾವುದೇ ಕಾರಣಕ್ಕೂ ಮದ್ದೂರು ನಗರಸಭೆ ವ್ಯಾಪ್ತಿಗೆ ಈ ಗ್ರಾಮಗಳನ್ನು ಸೇರಿಸಬಾರದು. ಕೂಡಲೇ ಈ ಜನವಿರೋಧಿ ನಿರ್ಧಾರವನ್ನ ಹಿಂಪಡೆಯಬೇಕೆಂದು ಒಕ್ಕೂರಲ ಒತ್ತಾಯ ಮಾಡಿರುತ್ತಾರೆ. ಸ್ಥಳೀಯರ ಮನವಿಗೆ ಮನ್ನಣೆ ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ. ಅಲ್ಲದೆ, ಜನತೆಯ ನಿರ್ಧಾರಕ್ಕೆ ವಿರುದ್ಧವಾಗಿ ಸರಕಾರ ನಡೆದುಕೊಳ್ಳುವುದು ಸರಿಯಲ್ಲ ಎಂದು ಸಚಿವರು ಮುಖ್ಯಮಂತ್ರಿಗಳನ್ನ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!