ಉದಯವಾಹಿನಿ, ಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದಿಂದಾಗಿ ಮಧ್ಯ ಪ್ರಾಚ್ಯದಲ್ಲಿ ಸಿಲುಕಿರೋ ಕರ್ನಾಟಕದವರ ರಕ್ಷಣೆಗೆ ಕರ್ನಾಟಕ ಸರ್ಕಾರ ಕ್ರಮವಹಿಸಿದೆ ಅಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರು ಆತಂಕವಾಗೋದು ಬೇಡ. ರಾಜ್ಯ ಸರ್ಕಾರ ಕೇಂದ್ರ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದೆ. ಎಲ್ಲರ ರಕ್ಷಣೆಗೂ ಕ್ರಮ ತೆಗೆದುಕೊಳ್ಳಲಿದೆ ಎಂದು ಅಭಯ ನೀಡಿದರು. ಸಹಾಯವಾಣಿ ಪ್ರಾರಂಭ ಮಾಡಲಾಗಿದೆ. ಈವರೆಗೂ 109 ಜನ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಈಗಾಗಲೇ ವಿದೇಶಾಂಗ ಇಲಾಖೆ ಮತ್ತು ದೆಹಲಿಯಲ್ಲಿರೋ ನಮ್ಮ ರೆಸಿಡೆಂಟ್ ಕಮೀಷನರ್ ಕೂಡ ಕೇಂದ್ರದ ಜೊತೆ ಸಂಪರ್ಕದಲ್ಲಿ ಇದ್ದಾರೆ ಅಂತ ಮಾಹಿತಿ ನೀಡಿದ್ರು.

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವವರಿಗೆ 3 ವಿಷಯಗಳ ಬಗ್ಗೆ ಆತಂಕ ಇದೆ. ನಮ್ಮನ್ನ ಹೇಗೆ ವಾಪಸ್ ಕರೆಸುತ್ತೀರಾ? ವಿಶೇಷ ವಿಮಾನದ ಮೂಲಕನಾ ಹೇಗೆ ಅಂತ. ನಾವು ಕೇಂದ್ರದ ಜೊತೆ ಮಾತಾಡ್ತಾ ಇದ್ದೇವೆ. ಸದ್ಯ ಈಗ ಏರ್ ಟ್ರಾಫಿಕ್ ನಿಷೇಧ ಆಗಿದೆ. ಏರ್ ಟ್ರಾಫಿಕ್ ಕ್ಲಿಯರ್ ಆದ ಕೂಡಲೇ ಕೇಂದ್ರ ಸರ್ಕಾರ ಹೇಗೆ ಕರೆಸಿಕೊಳ್ಳುತ್ತದೆ ನಮಗೆ ಮಾಹಿತಿ ಸಿಗುತ್ತದೆ. ಏರ್ ಟ್ರಾಫಿಕ್ ಕ್ಲಿಯರ್ ಆಗೋವರೆಗೂ ತೆರವು ಕೆಲಸ ಆಗೊಲ್ಲ. ಹೀಗಾಗಿ ಎಲ್ಲರೂ ಶಾಂತವಾಗಿ ಇರಬೇಕು ಅಂತ ಮನವಿ ಮಾಡಿದ್ರು. ಕದನ ವಿರಾಮ ಆದ ಕೂಡಲೇ ವಾಪಸ್ ಕರೆಸಲು ಕ್ರಮ ಆಗುತ್ತದೆ ಅಂತ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!