ಉದಯವಾಹಿನಿ, ಹಾವೇರಿ: ಕುರಿ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು 30 ಕುರಿಗಳು ಸಜೀವ ದಹನವಾದ ಘಟನೆ ರಾಣೇಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ.
ಸಾವಿಗೀಡಾದ ಕುರಿಗಳು ಹುಚ್ಚಪ್ಪ ಮುದ್ದಿ ಎಂಬವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಈ ಘಟನೆ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಕೂಡಲೇ ಗ್ರಾಮಸ್ಥರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿದ್ದಾರೆ.
ಅನಾರೋಗ್ಯದಿಂದ ಮಾಲೀಕ ಹುಚ್ಚಪ್ಪ ಮುದ್ದಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಈ ದುರ್ಘಟನೆ ನಡೆದಿದೆ

Leave a Reply

Your email address will not be published. Required fields are marked *

error: Content is protected !!