ಉದಯವಾಹಿನಿ, ಶ್ರೀನಗರ: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕಾಶ್ಮೀರಿ ಸಂಸದರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ದಾರಿತಪ್ಪಿಸುವ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀನಗರ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಮತ್ತು ವಿಶ್ವಾದ್ಯಂತ ಶಿಯಾ ಮುಸ್ಲಿಮರು ಆರಾಧಿಸುವ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ವಿಚಾರದಲ್ಲಿ ಕೇಂದ್ರದ ನಡೆಯನ್ನು ಸಂಸದ ಟೀಕಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಮತ್ತು ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ಮಹಿಳಾ ಪ್ರತಿಭಟನಾಕಾರರ ಮೇಲೆ ನಡೆದ ಹಲ್ಲೆಯ ವೀಡಿಯೊಗಳನ್ನು ಮೆಹದಿ ಅಪ್‌ಲೋಡ್ ಮಾಡಿದ್ದರು.
