ಉದಯವಾಹಿನಿ, ಸ್ಯಾಂಡಲ್‌ವುಡ್ ತಾರೆಯರು ಪಾಪರಾಜಿಗಳ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಕೆಲ ಪಾಪರಾಜಿಗಳು ನಟಿಯರು ವಿಡಿಯೋಗಳನ್ನು ಚಿತ್ರೀಕರಿಸಿ, ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ನಟಿಯರ ದೇಹವನ್ನು ಅನಾವಶ್ಯಕವಾಗಿ ಜೂಮ್ ಮಾಡಿ, ವಿಡಿಯೋ ಚಿತ್ರೀಕರಿಸುವಂತಹ ಈ ಬೆಳವಣಿಗೆ ಬಗ್ಗೆ
ಟೀಕೆಗಳು ವ್ಯಕ್ತವಾಗುತ್ತಿದೆ. ಈ ವರ್ತನೆಯ ವಿರುದ್ಧ ಸಪ್ತಮಿ ಗೌಡ, ಯುವ ರಾಜ್‌ಕುಮಾರ್, ರಮ್ಯಾ ದಿವ್ಯ ಸ್ಪಂದನಾ ಸೇರಿದಂತೆ ಹಲವರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಪ್ತಮಿ ಗೌಡ ಪೋಸ್ಟ್
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ನಮ್ಮ ಕಲೆಯಿಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ ಎಂದು ಸಪ್ತಮಿ ಗೌಡ ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!