ಉದಯವಾಹಿನಿ, ನೆಲಮಂಗಲ: ಹೃದಯಾಘಾತದಿಂದ ನವವಿವಾಹಿತ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿಯ ಅರೆಕೆತ್ತನಹಳ್ಳಿಯಲ್ಲಿ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯನ್ನು ಚರಣ್ (30) ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆ ಚರಣ್ ಅವರ ಮದುವೆಯಾಗಿತ್ತು. ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಈ ವೇಳೆ ಮನೆಯಲ್ಲೇ ಅವರು ಕುಸಿದು ಬಿದ್ದಿದ್ದರು.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದನ್ನು ಧೃಢಪಡಿಸಿದ್ದರು. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲದ ಶವಗಾರಕ್ಕೆ ರವಾನೆ ಮಾಡಲಾಗಿದೆ. ಚರಣ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *

error: Content is protected !!