ಉದಯವಾಹಿನಿ, ಅಮರಾವತಿ: ಕರ್ನಾಟಕ ಬಜೆಟ್‌ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ ಅವರು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ ಘೋಷಣೆ ಮಾಡಿದ್ದರು. ಇದಾದ ಕೆಲವೇ ಹೊತ್ತಲ್ಲಿ ಆಂಧ್ರಪ್ರದೇಶ ಸರ್ಕಾರ 13 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಘೋಷಣೆ ಮಾಡಿದೆ.
ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು, 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಬಗ್ಗೆ ಬಂದಿರುವ ಸಲಹೆಗಳನ್ನು ನಾವು ಸ್ವೀಕರಿಸಿದ್ದೇವೆ. ಖಂಡಿತವಾಗಿಯೂ, ಮುಂಬರುವ 90 ದಿನಗಳಲ್ಲಿ ಇದನ್ನೂ ನಾವು ಜಾರಿಗೆ ತರುತ್ತೇವೆ ಎಂದಿದ್ದಾರೆ. ಸಾಮಾಜಿಕ ಜಾಲತಾಣ ನಿಷೇಧ 13 ವರ್ಷ ಅಥವಾ 16 ವರ್ಷವಾಗಿರಬೇಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲರೂ ಒಪ್ಪಿದರೆ, ಈ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಕರ್ನಾಟಕದಲ್ಲಿ ಸಾಮಾಜಿಕ ಜಾಲತಾಣ ನಿಷೇಧಿಸಿ ಸಿಎಂ ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. 2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್‌ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.

 

Leave a Reply

Your email address will not be published. Required fields are marked *

error: Content is protected !!