ಉದಯವಾಹಿನಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನವೆಂಬರ್ 2022ರಲ್ಲಿ ಅಧಿಕಾರ ಸ್ವೀಕರಿಸಿದ್ದ ಆನಂದ ಬೋಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ತಮ್ಮ ಸ್ಥಾನಕ್ಕೆ ದೆಹಲಿಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರ ಕಚೇರಿಯಲ್ಲಿ ಸಾಕಷ್ಟು ಸಮಯ ಕಳೆದಿರುವುದರಿಂದ ಮುಂದೆ ಮುಂದುವರಿಯಲು ಬಯಸುವುದಿಲ್ಲ ಎಂದು ಹೇಳಿದರು.ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರು ಗುರುವಾರ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಗುಪ್ತಾ ಅವರನ್ನು ಜುಲೈ 2025 ರಲ್ಲಿ ಲಡಾಖ್‌ನ ಮೂರನೇ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿತ್ತು.
ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೃಹ ಸಚಿವ ಅಮಿತ್ ಶಾ ಅವರು ಆರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ನೇಮಿಸಲಿದ್ದಾರೆ ಎಂದು ಎಕ್ಸ್‌ನಲ್ಲಿ ತಿಳಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
