ಉದಯವಾಹಿನಿ, ಬೆಂಗಳೂರು: ಎಲ್‌ಪಿಜಿ ದರ ಏರಿಸುವ ಮೂಲಕ ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ, ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಎಲ್‌ಪಿಜಿ ದರ ಏರಿಕೆ ಮಧ್ಯಮ ವರ್ಗದ ಕುಟುಂಬಗಳಿಗೆ ವೆಚ್ಚ ದುಬಾರಿಯಾಗಲಿದೆ. ಈ ಏರಿಕೆ ಅನಿವಾರ್ಯ ಕ್ರಮವೇನಲ್ಲ. ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿವೆ. ಈ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
