ಉದಯವಾಹಿನಿ, ಲಕ್ನೋ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ನೋಗೆ ವಾಪಸ್ ಆಗಿ, ತುರ್ತು ಲ್ಯಾಂಡಿಂಗ್ ಆಗಿದೆ. ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಕೌಶಂಬಿಗೆ ಪ್ರಯಾಣಿಸುತ್ತಿದ್ದರು. ಇಂದು (ಮಾ.7) ಲಕ್ನೋದ ಲಾ ಮಾರ್ಟಿನಿಯರ್ ಕಾಲೇಜು ಮೈದಾನದ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗಿತ್ತು. ಸ್ವಲ್ಪ ಸಮಯಕ್ಕೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿ, ಹೊಗೆ ಕಾಣಿಸಿಕೊಂಡಿತು. ಹೀಗಾಗಿ ಕೂಡಲೇ ಲಕ್ನೋದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು.

ಕೇಶವ್ ಪ್ರಸಾದ್ ಮೌರ್ಯ ಅವರು ಕೆಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೌಶಂಬಿಗೆ ತೆರಳುತ್ತಿದ್ದರು. ಡಿಸಿಎಂ ಜೊತೆ ಅವರ ಸಹಾಯಕ ವಿವೇಕ್ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು ಐದು ಜನರಿದ್ದರು ಎಂದು ತಿಳಿದುಬಂದಿದೆ. ಸದ್ಯ ಡಿಸಿಎಂ ಆರೋಗ್ಯವಾಗಿದ್ದು, ಬೇರೆ ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಹೆಲಿಕಾಪ್ಟರ್‌ನಲ್ಲಿ ಹೊಗೆ ಕಾಣಿಸಿದ್ದರ ಹಿಂದಿನ ಕಾರಣ ಪತ್ತೆ ಹಚ್ಚಲು ತಜ್ಞರ ತಂಡ ಕಾರ್ಯನಿರ್ವಹಿಸುತ್ತಿದೆ

Leave a Reply

Your email address will not be published. Required fields are marked *

error: Content is protected !!