ಉದಯವಾಹಿನಿ, ನಟ-ರಾಜಕಾರಣಿ ವಿಜಯ್ ಪಕ್ಷ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಚೆನ್ನೈನ ಮಾಮಲ್ಲಪುರಂನಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದೆ.
ಇಲ್ಲಿ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಣಾಳಿಕೆಯ ಭಾಗವಾಗಿ, ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಅವರು ಘೋಷಿಸಲಿದ್ದಾರೆ ಎಂದು ವರದಿಯಾಗಿದೆ.
ಇದರ ಬೆನ್ನಲೇ ವಿಜಯ್ ವಿರುದ್ಧ ನಿರ್ದೇಶಕ ಅಮೀರ್ ಆಕ್ರೋಶ ವ್ಯಕ್ತಪಡಿಸಿದ್ದು, ತನ್ನ ಹೆಂಡತಿಯನ್ನು ಮನೆಯಿಂದ ಹೊರಗೆ ಹಾಕಿ ಇದೀಗ ‘ಮಹಿಳಾ ದಿನಾಚರಣೆ’ ಎಂಬ ನಾಚಿಕೆಗೇಡಿನ ರಾಜಕೀಯ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನಟ ವಿಜಯ್ ವಿರುದ್ಧ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.2021ರಲ್ಲಿ ವಿಜಯ್ ನಟಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಸಂಗೀತಾ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!