
ಚಾಳಿ ಬಿಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಕರ್ನಾಟಕ ಮಾಹಿತಿ ಆಯೋಗ
ಉದಯವಾಹಿನಿ ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿದ್ದ ಅರ್ಜಿದಾರರಿಗೆ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದ ಬಿಡಿಎ ಅಧಿಕಾರಿಯೊಬ್ಬರಿಗೆ ಕರ್ನಾಟಕ ಮಾಹಿತಿ ಆಯೋಗ 4 ಪ್ರತ್ಯೇಕ ಪ್ರಕರಣಗಳಲ್ಲಿ 1 ಲಕ್ಷ ರೂ. ದಂಡ ವಿಧಿಸಿದೆ. ಅದೇ ರೀತಿ, ಬಿಡಿಎ ಮತ್ತೊಬ್ಬ ಅಧಿಕಾರಿಗೆ ಕೂಡ ಪ್ರಕರಣವೊಂದರಲ್ಲಿ ಮಾಹಿತಿ ನೀಡದಿದ್ದಕ್ಕಾಗಿ 25 ಸಾವಿರ ರೂ. ದಂಡ ವಿಧಿಸಿದೆ.
