ಉದಯವಾಹಿನಿ, ಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ವಿಶ್ವಗುರು ಮೋದಿ ದೇಶ ಮಾರಾಟ ಮಾಡುತ್ತಾರೆ ಎಂದು ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಕೇಂದ್ರಕ್ಕೆ ಬೆಲೆ ಏರಿಕೆ ಮಾಡಲು ಕಾರಣ ಬೇಕು. ಯುದ್ಧದಿಂದ ಏರಿಕೆ ಮಾಡಿದ್ದಲ್ಲ ಇದು. 50-60 ರೂ. ಗ್ಯಾಸ್ ಬೆಲೆ ಏರಿಕೆ ಮಾಡಿದ್ದು ಖಂಡನೀಯ ಎಂದು ಕಿಡಿಕಾರಿದರು. ಮೋದಿಗೆ ಆಡಳಿತ ನಡೆಸಲು ಗೊತ್ತಿಲ್ಲ. ಟ್ರಂಪ್ ಹೇಳಿದಂಗೆ ಮೋದಿ ನಡೆದುಕೊಳ್ಳುತ್ತಿದ್ದಾರೆ. ಟ್ರಂಪ್ ಆದೇಶ ಪಾಲಿಸುತ್ತಿದ್ದಾರೆ. ಹಿಂದೆ ಬ್ರಿಟೀಷರ ಅಡಿಯಾಳು ಆಗಿದ್ದೆವು. ಈಗ ಪ್ರಧಾನಿ ದೇಶವನ್ನು ಅಮೆರಿಕಗೆ ಒತ್ತೆ ಇಟ್ಟಿದ್ದಾರೆ. ಯಾವ ಮಂತ್ರಿಗೂ ಸ್ವಾತಂತ್ರ್ಯ ಇಲ್ಲ. ಏನಿದ್ದರೂ ಅಮಿತ್ ಶಾ, ಮೋದಿ ಹೇಳಿದ್ದು ಮಾತ್ರ ನಡೆಯುತ್ತದೆ ಎಂದು ಆಕ್ರೋಶ ಹೊರಹಾಕಿದರು.

Leave a Reply

Your email address will not be published. Required fields are marked *

error: Content is protected !!