
ಉದಯವಾಹಿನಿ, ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜಳಾ-ಮುನಿರಾಜು ದಂಪತಿಯ ಪುತ್ರಿ ಮೊನಿಷಾ(25) ಸಾವನ್ನಪ್ಪಿದ್ದಾರೆ. ಮೃತ ಮೊನಿಷಾ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
