ಉದಯವಾಹಿನಿ,  ಬೆಂಗಳೂರು: ದೆಹಲಿಗೆ ತೆರಳಿರುವ ಡಿಸಿಎಂ ಡಿಕೆಶಿ ಪರವಾಗಿ ನಾವಿದ್ದೇವೆ. ಅವರು ನಾಳೆನೇ ಬರಲಿ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಸಿಎಂ ಡಿಕೆಶಿ ದೆಹಲಿಯಲ್ಲೇ ಉಳಿದಿರುವ ವಿಚಾರವಾಗಿ ಪ್ರತಿಕ್ರಿಸಿದರು. ಡಿಸಿಎಂ ಪರವಾಗಿ ನಾವಿದ್ದೇವೆ. ನಾವು ಇಲ್ಲಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ. ಆರ್‍ಎಸ್‍ಎಸ್ ಬಗ್ಗೆ ಮಾಜಿ ಸಂಸದ ಅನಂತ ಕುಮಾರ್ ಹೆಗ್ಡೆ ಹೇಳಿಕೆ ವಿಚಾರವಾಗಿ, ಆರ್‍ಎಸ್‍ಎಸ್ ಬ್ಯಾನ್ ಮಾಡ್ತೀವಿ ಅಂತ ಯಾರೂ ಹೇಳಿಲ್ಲ. ಯಾರೂ ಬ್ಯಾನ್ ಮಾಡೋಕೆ ಆಗಲ್ಲ. ಚಟುವಟಿಕೆಗಳ ನಿಷೇಧ ಬೇರೆ, ಇದು ಬೇರೆ ಎಂದು ಸ್ಪಷ್ಟಪಡಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಡಿ.ಕೆ ಶಿವಕುಮಾರ್ ತೆರಳಿದ್ದರು. ಇಂದು (ಮಾ.9) ಬೆಳಗ್ಗೆ ದೆಹಲಿಯಿಂದ ಅವರು ವಾಪಸ್ ಆಗಬೇಕಿತ್ತು. ಇಂದು ಕೂಡಾ ದೆಹಲಿಯಲ್ಲಿರಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!