ಉದಯವಾಹಿನಿ, ಇಟಾನಗರ: ಅರುಣಾಚಲ ಪ್ರದೇಶದ ಪಾಸಿಘಾಟ್‌ನ ಮೆಬೊ ಮತ್ತು ಸಿಗರ್ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಭಾರತೀಯ ವಾಯುಪಡೆ 66,000 ಲೀಟರ್ ನೀರನ್ನು ಬಳಸಿದೆ.ಬೆಂಕಿ ನಂದಿಸಲು ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ಮಿ -17 ವಿ 5 ಹೆಲಿಕಾಪ್ಟರ್‌ನ್ನು ನಿಯೋಜಿಸಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯ ಫೋಟೋ ಹಾಗೂ ವಿಡಿಯೋವನ್ನು ವಾಯುಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ.Mi-17 V5 ಹೆಲಿಕಾಪ್ಟರ್‌ ಬೆಂಕಿ ನಂದಿಸುವ ಕಾರ್ಯಾಚರಣೆಯ ವೀಡಿಯೋವನ್ನು ವಾಯುಪಡೆ ಹಂಚಿಕೊಂಡಿದ್ದು, ಹೆಲಿಕಾಪ್ಟರ್‌ನ ಸಾಮರ್ಥ್ಯ ಹಾಗೂ ನಿಖರವಾದ ಕಾರ್ಯವನ್ನು ಅದರಲ್ಲಿ ನೋಡಬಹುದಾಗಿದೆ. ಹಲವಾರು ಬಾರಿ ಹಾರಾಟ ನಡೆಸಿದ Mi-17 V5 ಹೆಲಿಕಾಪ್ಟರ್‌ ಬೆಂಕಿ ಹೊತ್ತಿದ್ದ ಸ್ಥಳದಲ್ಲಿ ಸುಮಾರು 66,000 ಲೀಟರ್‌ ನೀರನ್ನು ಸುರಿದಿದೆ.”

ಇತ್ತೀಚೆಗೆ ಅರುಣಾಚಲ ಪ್ರದೇಶದ ವಾಲೋಂಗ್‌ನಲ್ಲಿ, ಐಎಎಫ್ ಹೆಲಿಕಾಪ್ಟರ್‌ಗಳು ಬೆಂಕಿ ಹೊತ್ತಿಕೊಂಡ ಪ್ರದೇಶದ ಮೇಲೆ 139,800 ಲೀಟರ್ ನೀರನ್ನು ಹರಿಸುವ ಮೂಲಕ ಯಶಸ್ವಿಯಾಗಿ ನಂದಿಸಿದ್ದವು. ಅಸ್ಪಷ್ಟ ಗೋಚರತೆ ಮತ್ತು ಗಾಳಿಯಿಂದಾಗಿ ಈ ವೈಮಾನಿಕ ಕಾರ್ಯಾಚರಣೆ ಸವಾಲಿನಿಂದ ಕೂಡಿತ್ತು ಎಂದು ಅಧಿಕಾರಿಗಳು ಹೇಳಿದ್ದರು.

 

Leave a Reply

Your email address will not be published. Required fields are marked *

error: Content is protected !!