
ಉದಯವಾಹಿನಿ, ಮಸ್ಕಿ: ಮಣಿಪುರದಲ್ಲಿ ಬುಡಕಟ್ಟು ಜನಾಂಗದ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪಿಗಳಿಗೆ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ರಾಯಿಸಿ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಮುಖಂಡರು ಉಪ ತಹಶೀಲ್ದಾರ ಪ್ರಕಾಶ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ನಂತರ ಸಂಘದ ಉಪಾಧ್ಯಕ್ಷ ದೇವರಾಜ ಮಡಿವಾಳ ಮಾತನಾಡಿ, ಈಚೆಗೆ ಮಹಿಳೆಯರ ಮೇಲೆ ವ್ಯಾಪಕ ಹಿಂಸಾಚಾರ ನಡೆಯುತ್ತಿದ್ದು,ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ, ಕೇಂದ್ರಸರಕಾರ ಹಾಗೂ ರಾಜ್ಯ ಸರ್ಕಾರಗಳು ಅಲ್ಲಿನ ಮಹಿಳೆಯರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ.ಮಹಿಳೆಯರನ್ನು ಸಾಮೂಹಿಕ ಅತ್ಯಾಚಾರಕ್ಕೆ ಇಲ್ಲಿನ ಪೊಲೀಸರು ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ದೂರಿದರು. ಈ ಸಂದರ್ಭದಲ್ಲಿ ತಾಲೂಕ ಘಟಕ ಅಧ್ಯಕ್ಷ ಚಾದಪಾಷಾ,ಗಂಗಾಧರ ತೋರಣದಿನ್ನಿ ಸೇರಿದಂತೆ ಇನ್ನಿತರಿದ್ದರು
