ಉದಯವಾಹಿನಿ, ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಜಾಗತಿಕ ಇಂಧನ ಪೂರೈಕೆಯನ್ನು ಬೆಂಬಲಿಸಲು ಅಗತ್ಯ ಕ್ರಮ ಕೈಗೊಳ್ಳಲು ಸಿದ್ದ ಎಂದು ಜಿ7 ರಾಷ್ಟ್ರಗಳು ಘೋಷಿಸಿವೆ. ಜಿ7 ರಾಷ್ಟ್ರಗಳ ಹಣಕಾಸು ಸಚಿವರು ಮತ್ತು ಅಂತರರಾಷ್ಟ್ರೀಯ ಇಂಧನ ಸಂಸ್ಥೆಯ (ಐಇಎ) ವರ್ಚುವಲ್ ಸಭೆ ನಡೆದಿದ್ದು, ತುರ್ತು ಸಂದರ್ಭದಲ್ಲಿ ಬಳಕೆಗಾಗಿ ದಾಸ್ತಾನು ಮಾಡಿರುವ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಬಗ್ಗೆ ಈ ದೇಶಗಳ ನಡುವೆ ಒಮ್ಮತ ಮೂಡಲಿಲ್ಲ.
ಸೋಮವಾರ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ ಸುಮಾರು 120 ಡಾಲರ್‌ಗೆ ತಲುಪಿದೆ. ಇದರಿಂದಾಗಿ ಜಾಗತಿಕ ಷೇರು ಮಾರುಕಟ್ಟೆಗಳು ಕುಸಿತ ಕಂಡಿವೆ.
‘ಇತ್ತೀಚಿನ ದಿನಗಳಲ್ಲಿ ಜಾಗತಿಕ ತೈಲ ಮಾರುಕಟ್ಟೆಗಳ ಪರಿಸ್ಥಿತಿ ತೀರಾ ಹದಗೆಟ್ಟಿವೆ’ ಎಂದು ಐಎಇ ಮುಖ್ಯಸ್ಥ ಫಾತಿಹ್ ಬಿರೋಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!