ಉದಯವಾಹಿನಿ, ದುನಿಯಾ ವಿಜಯ್ ಅಭಿನಯದ ಸಾಮಾಜಿಕ ಕಥಾಹಂದರ ಹೊಂದಿರುವ ‘ಲ್ಯಾಂಡ್‌ಾರ್ಡ್’ ಸಿನಿಮಾ ಇದೀಗ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡು ಪ್ರೇಕ್ಷಕರ ಗಮನ ಸೆಳೆದಿದ್ದ ಈ ಚಿತ್ರ ಶೀಘ್ರದಲ್ಲೇ ಡಿಜಿಟಲ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೊಮ್ಮೆ ಸಿನಿಪ್ರಿಯರ ಮುಂದೆ ಬರಲಿದೆ.
ಜಡೇಶ್ ಕೆ ಹಂಪಿ ನಿರ್ದೇಶನದ ಈ ಸಿನಿಮಾ ಜಾತಿ ವ್ಯವಸ್ಥೆ ಮತ್ತು ಜೀತ ಪದ್ಧತಿಯಂತಹ ಗಂಭೀರ ಸಾಮಾಜಿಕ ವಿಷಯಗಳನ್ನು ಒಳಗೊಂಡ ಕಥೆಯನ್ನು ಹೇಳುತ್ತದೆ. ಚಿತ್ರದಲ್ಲಿ ದುನಿಯಾ ವಿಜಯ್ ವಿಭಿನ್ನ ಹಾಗೂ ಪ್ರಭಾವಶಾಲಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ನಾಯಕಿಯಾಗಿ ರಚಿತಾ ರಾಮ್ ಕೂಡ ವಯಸ್ಸಾದ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.
ಈ ಸಿನಿಮಾದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ರಾಜ್ ಬಿ ಶೆಟ್ಟಿ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಉಮಾಶ್ರೀ ಮತ್ತು ಸಿರೀಶ್ ಬೈಕಾಡಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
