ತಿರುವನಂತಪುರ: 2024ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತ ತನ್ನ ಸುಂದರ ಕಣ್ಣುಗಳ ಮೂಲಕವೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದ ಮೊನಾಲಿಸಾ ಬೋಂಸ್ಲೆ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಮಲಯಾಳಂ ಚಿತ್ರದ ಚಿತ್ರೀಕರಣಕ್ಕಾಗಿ ತಿರುವನಂತಪುರದಲ್ಲಿರುವ ಮೊನಾಲಿಸಾ, ಥಂಪನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೊನಾಲಿಸಾ ಬೆಳಗ್ಗೆ ತನ್ನ ಗೆಳೆಯನೊಂದಿಗೆ ಠಾಣೆಗೆ ಬಂದು ತನ್ನ ತಂದೆ ವಿಜಯ್ ಸಿಂಗ್ ಭೋಸ್ಲೆ ವಿರುದ್ಧ ದೂರು ನೀಡಿದ್ದಾರೆ. ತಂದೆ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. ಯಾವುದೇ ದೈಹಿಕ ಕಿರುಕುಳ ನಡೆದಿಲ್ಲ. ಪ್ರಾಥಮಿಕವಾಗಿ ಬಲವಂತದ ವಿವಾಹ ಪ್ರಸ್ತಾಪವಾಗಿದೆ. ಮೊನಾಲಿಸಾ ತಂದೆ ತನ್ನ ಮೇಲೆ ಒತ್ತಡ ಹೇರುತ್ತಲೇ ಇದ್ದುದರಿಂದ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಾವು ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!