ಉದಯವಾಹಿನಿ, ಕಳೆದ ಒಂದು ವರ್ಷದಿಂದ ಹರಿದಾಡುತ್ತಿದ್ದ ವದಂತಿಗಳಿಗೆ ಈಗ ಅಧಿಕೃತ ತೆರೆ ಬಿದ್ದಿದೆ. ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಮತ್ತು ಉದ್ಯಮಿ ಸೊಹೈಲ್ ಖತುರಿಯಾ ಅವರಿಗೆ ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿದೆ.
ವಿಶೇಷವೆಂದರೆ, ಹನ್ಸಿಕಾ ಅವರು ಪತಿಯಿಂದ ಯಾವುದೇ ರೀತಿಯ ಹಣ ಅಥವಾ ಜೀವನಾಂಶವನ್ನು ಪಡೆದಿಲ್ಲ.
2022ರ ಡಿಸೆಂಬರ್‌ನಲ್ಲಿ ಜೈಪುರದಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದ ಈ ಜೋಡಿ, ಮದುವೆಯಾದ ಕೆಲವೇ ದಿನಗಳಲ್ಲಿ ಮನಸ್ತಾಪ ಎದುರಿಸಿತ್ತು. 2024ರ ಜುಲೈಯಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
