ಉದಯವಾಹಿನಿ, ಟಿ20 ವಿಶ್ವಕಪ್ ಟೂರ್ನಿಯ ಬಳಿಕ ರ್ಯಾಂಕಿಂಗ್ ನಲ್ಲಿ ಬ್ಯಾಟಿಂಗ್ ನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ರಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಪ್ರಮುಖ ಏರಿಕೆಯಲ್ಲಿ, ಸ್ಟಾರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಎರಡು ಸ್ಥಾನಗಳ ಏರಿಕೆ ಕಂಡು ಈಗ ಎರಡನೇ ಸ್ಥಾನಕ್ಕೆ ಏರಿದ್ದಾರೆ.
ಸಾಹಿಬ್‌ಜಾದಾ ಫರ್ಹಾನ್ 848 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಫಿಸ್ ಸಾಲ್ಟ್ 792 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಸ್ಟಾರ್ ಆಟಗಾರರಾದ ತಿಲಕ್ ವರ್ಮಾ ಮತ್ತು ಸೂರ್ಯ ಕುಮಾರ್ ಯಾದವ್ ಕೂಡ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ತಿಲಕ್ ವರ್ಮಾ 742 ಅಂಕಗಳನ್ನು ಪಡೆದು 7ನೇ ಸ್ಥಾನ ಪಡೆದರೆ, ಸೂರ್ಯ ಕುಮಾರ್ ಯಾದವ್ 722 ಅಂಕಗಳನ್ನು ಪಡೆದು 9ನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ನಲ್ಲಿ ಭಾರತದ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರು ಐಸಿಸಿ ಟಿ20ಐ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಕಳೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ 14 ವಿಕೆಟ್‌ಗಳ ಮೂಲಕ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜಂಟಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದರೂ ವರಣ್ ಶ್ರೇಯಾಂಕದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ್ದು, ಈ ಬಾರಿ ಅಫ್ಘಾನಿಸ್ತಾನ ತಂಡದ ಸ್ಪಿನ್ನರ್ ರಶೀದ್ ಖಾನ್ ಅವರಿಗೆ ಆ ಸ್ಥಾನ ಒಲಿದಿದೆ.

Leave a Reply

Your email address will not be published. Required fields are marked *

error: Content is protected !!