ಉದಯವಾಹಿನಿ, ಬಹುನಿರೀಕ್ಷಿತ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಮಾರ್ಚ್‌ 11ರಂದು ಬುಧವಾರ ಪ್ರಕಟಿಸಿದೆ. ಮಾರ್ಚ್‌ 28 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಕಾದಾಟ ನಡೆಸಲಿವೆ. ಟೂರ್ನಿಯ ಮೊದಲನೇ ಹಂತದ ಪಂದ್ಯಗಳು ಮಾರ್ಚ್‌ 18 ರಿಂದ ಏಪ್ರಿಲ್‌ 12ರವರೆಗೆ ನಡೆಯಲಿವೆ. ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ ಬಳಿಕ ಎರಡನೇ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್‌ ಸೈಕಿಯಾ ತಿಳಿಸಿದ್ದಾರೆ.

ಡಬಲ್‌ ಹೆಡರ್‌ ಪಂದ್ಯಗಳು ಸೇರಿದಂತೆ ಮೊದಲ ಹಂತದ 20 ಪಂದ್ಯಗಳನ್ನು ವಿಭಿನ್ನ 10 ಸ್ಥಳಗಳನ್ನುಆಡಿಸಲಾಗುತ್ತದೆ. ಬೆಂಗಳೂರು, ಮುಂಬೈ, ಗುವಾಹಟಿ, ನವ ಚಂಡೀಗಢ, ಲಖನೌ, ಕೋಲ್ಕತಾ, ಚೆನ್ನೈ, ದೆಹಲಿ, ಅಹಮದಾಬಾದ್‌ ಹಾಗೂ ಹೈದರಾಬಾದ್‌ನಲ್ಲಿ ಮೊದಲ ಹಂತದ ಪಂದ್ಯಗಳನ್ನು ಆಡಿಸಲಾಗುತ್ತದೆ. ಅಂದ ಹಾಗೆ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಹಾಗೂ ಅಸ್ಸಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ನೋಡಿಕೊಂಡು ಅಂತಿಮವಾಗಿ ಬಿಸಿಸಿಐ, ಟೂರ್ನಿಯ ಇನ್ನುಳಿದ ಭಾಗದ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

Leave a Reply

Your email address will not be published. Required fields are marked *

error: Content is protected !!