ಉದಯವಾಹಿನಿ, ಬೆಂಗಳೂರು: ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಮಹಿಳಾ ಅಧಿಕಾರಿಗಳ ಮತ್ತು ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರು ಬ್ಯಾಟಿಂಗ್, ಬೌಲಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.

ಪ್ರತಿಯೊಬ್ಬರೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬೇಕು, ನಾನು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತೇನೆ. ಕಳೆದ 25 ವರ್ಷಗಳಿಂದ ನಿರಂತರವಾಗಿ ಯೋಗ, ಏರೋಬಿಕ್ಸ್ ಮಾಡಿಕೊಂಡು ಬರುತ್ತಿದ್ದೇನೆ. ನಾನು ಇದುವರೆಗೂ 19 ಯೋಗ ಶಿಬಿರಗಳಲ್ಲಿ ಪಾಲ್ಗೊಂಡಿದ್ದು, ಈ ಪೈಕಿ ರಾಮದೇವ್ ಬಾಬಾ ಅವರ 11 ಯೋಗ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!