ಉದಯವಾಹಿನಿ, ಕಾರವಾರ: ಗಾಂಜಾ ಸೇವಿಸಿ ಗೋಕರ್ಣ ಕಡಲ ತೀರದಲ್ಲಿ ತೂರಾಡುತಿದ್ದ ಬೆಂಗಳೂರು ಮೂಲದ ಇಬ್ಬರು ಟೆಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಎಂ.ಎಸ್. ಪವನ್ (28) ಹಾಗೂ ರಾಘು ಸೆಲ್ವರಂಗನ್ (30) ಬಂಧಿತ ಟೆಕ್ಕಿಗಳಾಗಿದ್ದಾರೆ. ಇಬ್ಬರು ಗೋಕರ್ಣದ ರುದ್ರಪಾದದ ಕರಿಯಪ್ಪನ ಕಟ್ಟೆ ಸಮೀಪದ ಬ್ಲೂ ಪೀನ್ ಬೀಚ್ ಸ್ಟೇಟ್ ರೆಸಾರ್ಟ್ ಎದುರಿನ ಸಮುದ್ರ ತೀರದಲ್ಲಿ ಅಮಲಿನಲ್ಲಿ ತೇಲಾಡುತ್ತಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರು ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಟೆಕ್ಕಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!